Wednesday, June 3, 2026
Homeಕರಾವಳಿಮಂಗಳೂರಿನಲ್ಲಿ ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಸಿಎಂಗೆ ಸಮಸ್ಯೆ ವಿವರಿಸಿದ ವಿಧಾನಸಭೆ ವಿಪಕ್ಷ ಉಪನಾಯಕ...

ಮಂಗಳೂರಿನಲ್ಲಿ ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಸಿಎಂಗೆ ಸಮಸ್ಯೆ ವಿವರಿಸಿದ ವಿಧಾನಸಭೆ ವಿಪಕ್ಷ ಉಪನಾಯಕ ಖಾದರ್

- Advertisement -
- Advertisement -

ಮಂಗಳೂರು: ಮಂಗಳೂರು ಹೊರವಲಯದ ಬಟಪ್ಪಾಡಿಯಲ್ಲಿ ಕಡಲು ಕೊರೆತ ಸಂಭವಿಸಿದ ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಎಂಗೆ ಸ್ಥಳೀಯ ಶಾಸಕ ಮತ್ತು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್‌ ಸಮಸ್ಯೆಯ ಕುರಿತು ವಿವರಣೆ ನೀಡಿದರು.

ಈ ವೇಳೆ ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್‌. ಅಂಗಾರ ಉಪಸ್ಥಿತರಿದ್ದರು.

ಇದೇ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಬೊಮ್ಮಾಯಿ, ಸಂತ್ರಸ್ತರ ಅಹವಾಲು ಆಲಿಸಿ ಶಾಶ್ವತ ಪರಿಹಾರದ ಭರವಸೆ ನೀಡಿದರು.

ಬಳಿಕ ಮೂಡಬಿದಿರೆ ವಿಧಾನಸಭೆ ಕ್ಷೇತ್ರದಲ್ಲಿನ ಮಳೆಹಾನಿ ಪ್ರದೇಶಗಳ ಭೇಟಿ ರದ್ದುಗೊಳಿಸಿದ ಸಿಎಂ ನೇರವಾಗಿ ಉಡುಪಿಗೆ ತೆರಳಿದರು.

ಇಂದು ರಾತ್ರಿ ಸಿಎಂ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದು ನಾಳೆ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

- Advertisement -

Latest News

error: Content is protected !!