Saturday, August 29, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

- Advertisement -
- Advertisement -

ಸುಬ್ರಮಣ್ಯ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ .ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರ್ಶನ ಪಡೆದರು.

ನಂತರ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು ಕರಾವಳಿಯ ದೇವಸ್ಥಾನಕ್ಕೆ ಆಗಾಗ ಭೇಟಿ ನೀಡುತ್ತಿರುತ್ತೇನೆ. ಕಟೀಲು, ಧರ್ಮಸ್ಥಳ, ಕೊಲ್ಲೂರಿಗೆ ಭೇಟಿ ನೀಡುತ್ತಿರುತ್ತೇನೆ. ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದೇನೆ. ಇದೀಗ ಚುನಾವಣೆ ಬಂದಿದೆ ಆ ಹಿನ್ನಲೆ ಯಲ್ಲೂ ಭೇಟಿ ನೀಡಿ, ರಾಜ್ಯದ ಜನರ ಸುಭೀಕ್ಷೆಗೆ ಪ್ರಾರ್ಥಿಸಿದ್ದೇನೆ ಎಂದರು.

.

ಇತರೆ ಪ್ರಶ್ನೆಗಳಿಗೆ ಪ್ರತಿಕ್ರಿಯೆಗೆ ನಿರಾಕರಿಸಿ ಮಂಗಳೂರಿನತ್ತ ತೆರಳಿದರು. ಧರ್ಮಸ್ಥಳದಿಂದ ಹೆಲಿಕಾಫ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ಕಾರಿನಲ್ಲಿ ಕುಕ್ಕೆಗೆ ಬಂದು, ಹಿಂದಿರುಗುವ ವೇಳೆ ಕಾರಿನಲ್ಲಿ ಬಿಳಿನೆಲೆಗೆ ತೆರಳಿ ಅಲ್ಲಿಂದ ಹೆಲಿಕಾಫ್ಟರ್ ಮೂಲಕ ಮಂಗಳೂರಿನತ್ತ ಪ್ರಯಾಣ ಬೆಳೆಸಿದರು. ಸಿಎಂ ಭೇಟಿ ಹಿನ್ನಲೆಯಲ್ಲಿ ಬಿಳಿನೆಲೆಯಿಂದ ಕುಕ್ಕೆ ಸುಬ್ರಹ್ಮಣ್ಯ ವರೆಗೆ ಹೆಚ್ಚುವರಿ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿಯನ್ನು ದೇವಳದ ವತಿಯಿಂದ ಸ್ವಾಗತಿಸಿ, ಗೌರವಿಸಲಾಯಿತು. 

- Advertisement -

Latest News

error: Content is protected !!