Thursday, June 4, 2026
Homeತಾಜಾ ಸುದ್ದಿಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ  ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಚಂದ್ರಯಾನ 3 ಯಶಸ್ವಿ ಹಿನ್ನೆಲೆ:ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ  ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದರು.

ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸಿಎಂ ಅಭಿನಂದಿಸಿದರು.

ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎಸ್.ಎನ್. ಬೋಸರಾಜು ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆಗಿದ್ದರು.

ನಿನ್ನೆ ರಾತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದು, ಶನಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

- Advertisement -

Latest News

error: Content is protected !!