Thursday, March 28, 2024
Homeಕರಾವಳಿಉಡುಪಿನಾಳೆ ಮಂಗಳೂರು ಮತ್ತು ಉಡುಪಿಗೆ ಸಿಎಂ ಭೇಟಿ

ನಾಳೆ ಮಂಗಳೂರು ಮತ್ತು ಉಡುಪಿಗೆ ಸಿಎಂ ಭೇಟಿ

spot_img
- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆಯಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 10.50ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಸಿಎಂ ಬೊಮ್ಮಾಯಿ, 11.30 ಕ್ಕೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ಜೊತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ನಂತರ ಮಧ್ಯಾಹ್ನ 2.30 ಕ್ಕೆ ಮಂಗಳೂರಿನಿಂದ ಉಡುಪಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಸಂಜೆ 4 ಗಂಟೆಗೆ ಉಡುಪಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ರಾತ್ರಿ 8 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ವಾಪಸಾಗಲಿರುವ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಗಡಿ ಭಾಗದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಲಿದ್ದಾರೆ.

ಅನಂತರ ಶುಕ್ರವಾರ ಬೆಳಗ್ಗೆ 11.30ಕ್ಕೆ ವಿಮಾನದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

- Advertisement -
spot_img

Latest News

error: Content is protected !!