Wednesday, June 3, 2026
Homeಕರಾವಳಿದ.ಕ. ಸೇರಿ ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಂಜೆ ಸಿಎಂ ವೀಡಿಯೋ ಕಾನ್ಫರೆನ್ಸ್

ದ.ಕ. ಸೇರಿ ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಂಜೆ ಸಿಎಂ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಇತರೇ ಅಧಿಕಾರಿಗಳೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಕೋವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಆರ್.ಟಿ . ನಗರದ ಖಾಸಗಿ ನಿವಾಸದಿಂದಲೇ ವೀಡಿಯೋ ಕಾನ್ಫರೆನ್ಸ್ ನಲ್ಲಿ ಬೊಮ್ಮಾಯಿ ಭಾಗವಹಿಸಲಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಸಂಬಂಧಪಟ್ಟ ಜಿಲ್ಲೆಗಳಿಂದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ‌.

17 ಜಿಲ್ಲಾಡಳಿತಗಳ ಜೊತೆ ಸಿಎಂ ಸಭೆ ನಡೆಸಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ದಾವಣಗೆರೆ, ತುಮಕೂರು, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ಬೀದರ್, ಕಲ್ಬುರ್ಗಿ, ಗದಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!