Friday, May 17, 2024
Homeತಾಜಾ ಸುದ್ದಿಇಂದು ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸಿಎಂ ಚಾಲನೆ

ಇಂದು ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸಿಎಂ ಚಾಲನೆ

spot_img
- Advertisement -
- Advertisement -

ಬೆಂಗಳೂರು: ಇಂದು ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸಿಎಂ ಚಾಲನೆ ನೀಡಲಿದ್ದಾರೆ.  ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಅಕ್ಕಿಯ ಲಭ್ಯತೆ ಕಡಿಮೆ ಇರೋದರಿಂದ ಹಣ ನೀಡಲು ನಿರ್ಧರಿಸಿದ್ದಾರೆ.

ಅದರಂತೆ .ಇಂದು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳಿಂದ ಸಂಕ್ಷಿಪ್ತ ವಿವರಣೆಯನ್ನು ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಪಡೆಯಲಿದ್ದಾರೆ.ಬಳಿಕ ಬೆಳಿಗ್ಗೆ 11ಕ್ಕೆ ಆರಂಭಗೊಳ್ಳುವಂತ ವಿಧಾನಸಭೆ ಹಾಗೂ ಪರಿಷತ್ತಿನ ಕಾರ್ಯಕಲಾಪದಲ್ಲಿ ಭಾಗವಹಿಸಲಿದ್ದಾರೆ.

ಇನ್ನೂ ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವಂತ ಅನ್ನಭಾಗ್ಯಕ್ಕೆ 10 ವರ್ಷದ ಹಿನ್ನಲೆಯಲ್ಲಿ ಲೋಡಿಂಗ್ ಕಾರ್ಮಿಕರ ದಶಮಾನೋತ್ಸವ ಹಾಗೂ ಶ್ರಮಿಕರ ಹಕ್ಕೊತ್ತಾಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಬಳಿಕ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಚಾಲನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿದ ಬಳಿಕ, ಪಡಿತರದಾರರ ಖಾತೆಗೆ ಪ್ರತಿ ಕುಟುಂಬದ ಫಲಾನುಭವಿಗಳ ಖಾತೆಗೆ ರೂ.170 ಹಣ ಡಿಬಿಟಿ ಮೂಲಕ ಜಮಾ ಆಗಲಿದೆ.

- Advertisement -
spot_img

Latest News

error: Content is protected !!