Saturday, June 27, 2026
Homeಕರಾವಳಿಉಡುಪಿರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ : ಹೈಕಮಾಂಡ್ ನಿರ್ಧಾರವೇ ಅಂತಿಮ

ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ : ಹೈಕಮಾಂಡ್ ನಿರ್ಧಾರವೇ ಅಂತಿಮ

- Advertisement -
- Advertisement -

ಬೆಂಗಳೂರು : ಬಿಜೆಪಿ ಹೈಕಮಾಂಡ್ ಸೂಚನೆಯಂತೆ ತಾವು ನಡೆದುಕೊಳ್ಳೋದಾಗಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡುವ ಮೂಲಕ ತಮ್ಮ ರಾಜೀನಾಮೆ ಸುಳಿವನ್ನು ನೀಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನೀಡುವ ಸೂಚನೆ ಮೇರೆಗೆ ಜುಲೈ 26ರ ನಂತರ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ, ಜುಲೈ 25ಕ್ಕೆ ಹೈಕಮಾಂಡ್ ನಿಂದ ಸೂಚನೆ ಬರುತ್ತದೆ, ಅದರಂತೆ ನಡೆದುಕೊಳ್ಳುತ್ತೇನೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಮುಂದಿನ ಎರಡು ವರ್ಷ ಪಕ್ಷಕ್ಕಾಗಿ ಸಾಕಷ್ಟು ದುಡಿದು ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಉದ್ದೇಶ ಎಂದು ಹೇಳಿದ್ದಾರೆ.

ಎಲ್ಲ ಜನಾಂಗದ ನೂರಾರು ಮಠಾಧಿಪತಿಗಳು ಬಂದು ನನಗೆ ಆಶೀರ್ವಾದ ಮಾಡಿದ್ದಾರೆ, ಬೆಂಬಲವನ್ನು ಕೂಡ ನೀಡಿದ್ದಾರೆ, ಅಂತವುಗಳನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ನನ್ನ ಪರ ಯಾರೂ ಪ್ರತಿಭಟನೆ ಮಾಡಬೇಡಿ, ಜುಲೈ 26ರಂದು ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತದೆ, ಅಂದು ಎರಡು ವರ್ಷ ಸಾಧನೆಯ ವಿಶೇಷ ಕಾರ್ಯಕ್ರಮವಿದೆ.ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ರಾಷ್ಟ್ರೀಯ ಅಧ್ಯಕ್ಷರು ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

- Advertisement -

Latest News

error: Content is protected !!