Friday, June 5, 2026
Homeತಾಜಾ ಸುದ್ದಿಸಿಎಂ ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್

ಸಿಎಂ ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಗೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ನಿನ್ನೆಯಷ್ಟೇ ಯಡಿಯೂರಪ್ಪ ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಪುತ್ರಿಯಲ್ಲೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರನ್ನೂ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಯಡಿಯೂರಪ್ಪ ಅವರು ಪ್ರತಿನಿತ್ಯ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಸ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿ ವಾರವೂ ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.

- Advertisement -

Latest News

error: Content is protected !!