Saturday, June 6, 2026
Homeತಾಜಾ ಸುದ್ದಿ'ರಾಜ್ಯದಲ್ಲಿ ನೋ ಲಾಕ್‌ಡೌನ್‌: ಆದ್ರೆ ನಾಳೆಯಿಂದ ಎರಡು ವಾರಗಳ ಕಾಲ ಜಾತ್ರೆ, ಉತ್ಸವ ಮಾಡುವಂತಿಲ್ಲ'

‘ರಾಜ್ಯದಲ್ಲಿ ನೋ ಲಾಕ್‌ಡೌನ್‌: ಆದ್ರೆ ನಾಳೆಯಿಂದ ಎರಡು ವಾರಗಳ ಕಾಲ ಜಾತ್ರೆ, ಉತ್ಸವ ಮಾಡುವಂತಿಲ್ಲ’

- Advertisement -
- Advertisement -

ಬೆಂಗಳೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿದ ಸಿಎಂ, ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಮುಂದಿನ 15 ದಿನಗಳ ಕಾಲ ಸತ್ಯಾಗ್ರಹ ಮತ್ತು ಚಳವಳಿಗಳನ್ನು ಮಾಡದಂತೆ ಆದೇಶ ಹೊರಡಿಸಲಾಗಿದೆ. ಇನ್ನು ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಎರಡು ವಾರಗಳ ಕಾಲ ಜಾತ್ರೆ, ಉತ್ಸವ, ಮೇಳಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಆ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕೈ ಜೋಡಿಸುವಂತೆ ಸಭೆಯಲ್ಲಿ ಸಿಎಂ ಮನವಿ ಮಾಡಿದರು.

- Advertisement -

Latest News

error: Content is protected !!