Saturday, June 6, 2026
Homeತಾಜಾ ಸುದ್ದಿ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಯೋಗಿ ಆದಿತ್ಯನಾಥ್

 ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಯೋಗಿ ಆದಿತ್ಯನಾಥ್

- Advertisement -
- Advertisement -

ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾವು ನಾಳೆ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಒಂದು ಕಡೆ ಮುಸ್ಲಿಂ ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ಪ್ರದರ್ಶನ ಮಾಡದಂತೆ ನಿಷೇಧ ಹೇರಲಾಗಿದೆ. ಆದರೆ ಭಾರತದಲ್ಲಿ ಈ ಸಿನಿಮಾಗೆ ಕೆಲ ಕಡೆಯಲ್ಲಿ ತೆರಿಗೆ ವಿನಾಯತಿಯನ್ನು ಘೋಷಿಸಲಾಗುತ್ತಿದೆ.

ನಟ ಅಕ್ಷಯ್ ಕುಮಾರ್  ನಿನ್ನೆಯಷ್ಟೇ ಗಣ್ಯರಿಗಾಗಿ ಈ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜನೆ ಮಾಡಿದ್ದರು. ಈ ಪ್ರದರ್ಶನದಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತಾ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಿನಿಮಾವನ್ನು ವೀಕ್ಷಿಸಿದ ನಂತರ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದಾರೆ.

‘ಸಾಮ್ರಾಟ್ ಪ್ರಥ್ವಿರಾಜ್’ ಸಿನಿಮಾವು ಐತಿಹಾಸಿಕ ಸಿನಿಮಾವಾಗಿದ್ದು, ಎಲ್ಲರೂ ನೋಡಬೇಕು . ಈಗಾಗಿ ಉತ್ತರ ಪ್ರದೇಶದಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡುವುದಾಗಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಾಗಿಯೂ ಇವರು ತೆರಿಗೆ ವಿನಾಯತಿ ಘೋಷಿಸಿದ್ದರು. ಆನಂತರದಲ್ಲಿ ಅನೇಕ ರಾಜ್ಯಗಳು ದಿ ಕಾಶ್ಮೀರ್ ಫೈಲ್ಸ್  ಸಿನಿಮಾಕ್ಕೆ ತೆರಿಗೆ ವಿನಾಯತಿ ಘೋಷಿಸಿತ್ತು.

- Advertisement -

Latest News

error: Content is protected !!