- Advertisement -


- Advertisement -
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರೋತ್ಸಾಹ ಧನವನ್ನು ₹2,000 ಹೆಚ್ಚಿಸುವುದಾಗಿ ಸಿಎಂ ನೀಡಿದ ಭರವಸೆಗೆ ಆಶಾ ಕಾರ್ಯಕರ್ತೆಯರು ಒಪ್ಪಿಗೆ ಸೂಚಿಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರವೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಗಮನ ಹರಿಸಬೇಕು. ಈ ಹಿಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ 50:50 ಅನುಪಾತವಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಪಾಲಿನ ಮೊತ್ತವನ್ನು ₹2,000ಕ್ಕಿಂತ ಹೆಚ್ಚಿಸಿಲ್ಲ. ಈ ಹಿಂದೆ ನೀಡಿದ್ದ ಭರವಸೆಯಂತೆ ಸುದೀರ್ಘ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರ ಹೋರಾಟ ಮತ್ತು ಮನವಿಗಳು ತಮ್ಮ ಮನಸ್ಸನ್ನು ಕರಗಿಸಿವೆ ಎಂದು ತಿಳಿಸಿದರು.
- Advertisement -


