Wednesday, June 3, 2026
Homeತಾಜಾ ಸುದ್ದಿಮಂಗಳೂರಿನಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಮಂಗಳೂರಿನಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹ -2024ರ ಸಮಾರಂಭ ಮಂಗಳೂರಿನಲ್ಲಿ ಇಂದು ನಡೆಯಿತು.

ಕರಾವಳಿ ಉತ್ಸವ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಹಾಗೂ ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಉದ್ಯೋಗ, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ದಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರದ ಕುರಿತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿದರು.

ಈ ಸಂದರ್ಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಲಕ್ಷ್ಮಣ ಸವದಿ, ಜಿ.ಟಿ. ದೇವೇಗೌಡ, ಡಾ. ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

ಅಲ್ಲದೇ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಲ ಮತ್ತು ಕೆಎಂಎಫ್ ಪದಾಧಿಕಾರಿಗಳು, ಹಿರಿಯ ಸಹಕಾರಿಗಳು ಕೂಡಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!