- Advertisement -
- Advertisement -
ಬೆಂಗಳೂರು; ಗ್ರಾಮ ಪಂಚಾಯತಿಗಳು ಹಾಗು ಸ್ಥಳೀಯ ಯೋಜನೆ ಪ್ರದೇಶದ ಹೊರ ಭಾಗದಲ್ಲಿರುವ ಒಂದು ಏಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ/ ವಸತಿಯೇತರಿಗಾಗಿ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿಯೇ ಪಡೆಯಲು ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮಾನ್ಯ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗ ತೆರಳಿ ಮನವಿ ಸಲ್ಲಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಸಕರಾದ ಸುನಿಲ್ ಕುಮಾರ್,ಯಶಪಾಲ್ ಸುವರ್ಣ,ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಗುರುರಾಜ್ ಗಂಟಿಹೊಳೆ, ಭಾಗೀರಥಿ ಮುರುಳ್ಯ, ರಾಜೇಶ್ ನಾಯಕ್.ಉಪಸ್ಥಿತರಿದ್ದರು
- Advertisement -