Wednesday, June 24, 2026
Homeಕರಾವಳಿಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಆಗಸ್ಟ್ 27 ರಂದು ಪ್ರತಿಭಟನೆ

- Advertisement -
- Advertisement -

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರು ಆಗಸ್ಟ್ 27 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಪ್ರತಿಭಟನೆ ಬಳಿಕ ಮರುದಿನ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ನೀಡಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗುವುದು ಎಂದಿದ್ದಾರೆ.

- Advertisement -

Latest News

error: Content is protected !!