Monday, April 29, 2024
Homeಕರಾವಳಿಉಡುಪಿಕರಾವಳಿಗೆ ಕಾಲಿಟ್ಟ ಮಂಗನ ಕಾಯಿಲೆ; ಕಾಡಂಚಿನ ಗ್ರಾಮಗಳಲ್ಲಿ ಆತಂಕ

ಕರಾವಳಿಗೆ ಕಾಲಿಟ್ಟ ಮಂಗನ ಕಾಯಿಲೆ; ಕಾಡಂಚಿನ ಗ್ರಾಮಗಳಲ್ಲಿ ಆತಂಕ

spot_img
- Advertisement -
- Advertisement -

ಉಡುಪಿ: ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಕರಾವಳಿ ಪ್ರವೇಶಿಸಿದ್ದು, ಈ ವರ್ಷದ ಮೊದಲ ಕೆಎಫ್‌ಡಿ ಪ್ರಕರಣ ಕುಂದಾಪುರ ತಾಲ್ಲೂಕಿನ ವಂಡ್ರೆ ಹೋಬಳಿಯ ಕೆಂಚನೂರು ಗ್ರಾಮದಲ್ಲಿ ಕಾಣಿಸಿಕೊಂಡಿದೆ.

58 ವರ್ಷದ ಮಹಿಳೆಯಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದ್ದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮಹಿಳೆಯು ಶೀಘ್ರ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೆಎಫ್‌ಡಿ ಸೋಂಕು ಎಲ್ಲಡೆ ವ್ಯಾಪಿಸಿದರೆ ಪರಿಸ್ಥಿತಿ ಗಂಭೀರವಾಗುವ ಅಪಾಯವಿದ್ದು, ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಕಾಡಂಚಿನ ಗ್ರಾಮಗಳಲ್ಲಿ ವಾಸವಾಗಿರುವ ಜನರಿಗೆ ಮಂಗನ ಕಾಯಿಲೆಯ ಸೋಂಕು ಹರಡದಂತೆ ಎಚ್ಚರ ವಹಿಸಬೇಕಾದ ಅಗತ್ಯವಿದೆ. ಜಿಲ್ಲೆಯ ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ತಾಲ್ಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ಮಂಗಗಳ ಸಂಖ್ಯೆ ಅಧಿಕವಾಗಿರುವುದರಿಂದ ಈ ಭಾಗದಲ್ಲಿ ಮಂಗಗಳಿಂದ ಮನುಷ್ಯರಿಗೆ ಕೆಎಫ್‌ಡಿ ಸೋಂಕು ತಗುಲುವ ಭೀತಿ ಇದ್ದು ಸಾರ್ವಜನಿಕರು ಹೆಚ್ಚು ಜಾಗ್ರತೆ ವಹಿಸಬೇಕು.

- Advertisement -
spot_img

Latest News

error: Content is protected !!