Saturday, June 6, 2026
Homeತಾಜಾ ಸುದ್ದಿತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

- Advertisement -
- Advertisement -

ಹಾಸನ;ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ (16) ಮೃತ ದುರ್ವೈವಿ.

ಮಳೆಯಿಂದ ತೋಟದಲ್ಲಿ ತೆಂಗಿನ ಕಾಯಿ ಬಿದ್ದಿತ್ತು. ಅದನ್ನು ಹೆಕ್ಕುವಾಗ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ.ಆದರೆ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.

ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ.ಆದರೆ ಆತ ಕೊನೆಯುಸಿರೆಳೆದಿದ್ದಾನೆ.ಈ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!