Thursday, June 4, 2026
Homeಕರಾವಳಿಮಂಗಳೂರು; ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು; ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಮಂಗಳೂರು: ಕಾಲೇಜಿನಲ್ಲಿ ಸ್ಪೋರ್ಟ್ಸ್ ಡೇ ಇದೆ ಎಂದು ಮನೆಯಿಂದ ಹೋದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿ.ಎ ವ್ಯಾಸಂಗ ಮಾಡುತ್ತಿದ್ದ ವರ್ಷಿತಾ ಫ್ಲೋರಾ (19) ನಾಪತ್ತೆಯಾದ ವಿದ್ಯಾರ್ಥಿನಿ.

ವರ್ಷಿತಾ ಫೆ. 16ರಂದು ಬೆಳಗ್ಗೆ 7 ಗಂಟೆ ಸಮಯಕ್ಕೆ ಕಾಲೇಜಿಗೆ ಸ್ಪೋರ್ಟ್ಸ್ ಡೇ ಎಂದು ಹೇಳಿ ಹೋಗಿದ್ದಳು.ಅಪರಾಹ್ನ 3.30ಕ್ಕೆ ತಾಯಿಗೆ ಕರೆ ಮಾಡಿ ಮನೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಅನಂತರ ಅವರ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ ಎಂದು ಕಂಕನಾಡಿ ನಗರ ಠಾಣಾ ಪೊಲೀಸರಿಗೆ ದೂರಿನಲ್ಲಿ ತಿಳಿಸಲಾಗಿದೆ.

ಬಿಳಿ ಮೈಬಣ್ಣ, 5.4 ಅಡಿ ಎತ್ತರ, ದುಂಡು ಮುಖ, ಸಾಧಾರಣ ಶರೀರ, ಉದ್ದ ಕಪ್ಪು ತಲೆಕೂದಲು ಹೊಂದಿದ್ದು ಕಪ್ಪು ಬಣ್ಣದ ಪ್ಯಾಂಟ್‌, ಬಳಿ ಮತ್ತು ಕಂದು ಬಣ್ಣದ ಗೆರೆಗಳಿರುವ ಟೀ ಶರ್ಟ್‌ ಧರಿಸಿದ್ದರು. ಕನ್ನಡ, ಇಂಗ್ಲಿಷ್‌, ಹಿಂದಿ, ಕೊಂಕಣಿ ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಕಂಕನಾಡಿ ನಗರ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!