Thursday, May 16, 2024
Homeತಾಜಾ ಸುದ್ದಿBIG BREAKING: ಮೊದಲ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು

BIG BREAKING: ಮೊದಲ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು

spot_img
- Advertisement -
- Advertisement -

ಕೊರೊನಾ ಸೋಂಕು ದೇಶವ್ಯಾಪಿ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಪರೀಕ್ಷೆ ಕುರಿತಂತೆ ಕೇಂದ್ರ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮೊದಲ ಮತ್ತು ದ್ವಿತೀಯ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದು ಮಾಡಿ, ಅಂತಿಮ ವರ್ಷದ ಪರೀಕ್ಷೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಈ ವಿಷಯ ತಿಳಿಸಿದ್ದು, ಮೊದಲ ವರ್ಷದ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಸಾಧನೆ ಆಧರಿಸಿ ಮುಂದಿನ ವರ್ಷಕ್ಕೆ ತೇರ್ಗಡೆ ಮಾಡಲಾಗುತ್ತದೆ. ಅದೇ ರೀತಿ ಎರಡನೇ ವರ್ಷದ ವಿದ್ಯಾರ್ಥಿಗಳು ಹಿಂದಿನ ವರ್ಷ ಮತ್ತು ಇಂಟರ್ನಲ್ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಗಳಿಕೆ ಆಧಾರದ ಮೇಲೆ ಅಂತಿಮ ವರ್ಷಕ್ಕೆ ತೇರ್ಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಯ ನಡೆಸಲು ನಿರ್ಧರಿಸಲಾಗಿದ್ದು, ಇದನ್ನು ಜುಲೈನಲ್ಲಿ ನಿಗದಿಪಡಿಸಲಾಗಿದೆ. ಆದರೆ ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಆ ಸಂದರ್ಭದಲ್ಲಿ ನಿಯಂತ್ರಣಕ್ಕೆ ಬಾರದಿದ್ದರೆ ಆ ಬಳಿಕ ಪರೀಕ್ಷೆ ಮುಂದೂಡುವ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!