Monday, May 6, 2024
Homeಕರಾವಳಿಮಂಗಳೂರಿನಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಅಮಾನುಷವಾಗಿ ಥಳಿಸಿದ ಮತ್ತೊಂದು ಕಾಲೇಜು ವಿದ್ಯಾರ್ಥಿಗಳು

ಮಂಗಳೂರಿನಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಅಮಾನುಷವಾಗಿ ಥಳಿಸಿದ ಮತ್ತೊಂದು ಕಾಲೇಜು ವಿದ್ಯಾರ್ಥಿಗಳು

spot_img
- Advertisement -
- Advertisement -

ಮಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿಯ ಮೇಲೆ ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಅಡ್ಯಾರ್ ಬಳಿ ನಡೆದಿದೆ.

ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗೆ ಬಲ್ಮಠ ಬಳಿಯ ಇನ್ನೊಂದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಡ್ಯಾರ್ ಬಳಿಯ ಫ್ಲ್ಯಾಟ್ ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ.

ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಖಾಸಗಿ ಫ್ಲಾಟ್ ನಲ್ಲಿ ಕೂಡಿ ಹಾಕಿ ಮನ ಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ ಎಂಬ ವಿದ್ಯಾರ್ಥಿಗೆ ಥಳಿಸಿದ್ದು, ಮೈಯೆಲ್ಲಾ ರಕ್ತ ಹೆಪ್ಪುಗಟ್ಟುವಂತೆ ಹಲ್ಲೆ ನಡೆಸಲಾಗಿದೆ.

ಥಳಿತಕ್ಕೊಳಗಾದ ವಿದ್ಯಾರ್ಥಿಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಂದರು ಠಾಣೆ ಪೊಲೀಸರಿಂದ ಹಲ್ಲೆ ನಡೆಸಿದವರ ಪೈಕಿ ಓರ್ವನ ಬಂಧನವಾಗಿದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!