- Advertisement -


- Advertisement -
ಪುತ್ತೂರು: ಪೆರ್ಲಂಪಾಡಿ ನಿವಾಸಿಯೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ಉದಯ ಎನ್ನಲಾಗಿದೆ.
ಪ್ರಕರಣದ ವಿವರ: ವಿದ್ಯಾರ್ಥಿನಿಯು ಕೆಲ ದಿನಗಳ ಹಿಂದೆ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಯುವಕನೋರ್ವ ಬೈಕಿನಲ್ಲಿ ಆಗಮಿಸಿ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಈ ಬಗ್ಗೆ ಕೇಸು ದಾಖಲಿಸಿಕೊಂಡು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್ ನಂಬರ್ ಪತ್ತೆ ಹಚ್ಚಿದ್ದರು. ಸಿಸಿ ಟಿವಿ ಆಧಾರದ ಮೇಲೆ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.
- Advertisement -


