Friday, April 4, 2025
Homeಕರಾವಳಿಮಂಗಳೂರುಬೆಳ್ತಂಗಡಿ; ಕಾಲೇಜು ವಿದ್ಯಾರ್ಥಿನಿಯನ್ನು ತಡೆದು ಹಲ್ಲೆ ಮಾಡಿ, ಕೊಲೆ ಬೆದರಿಕೆ

ಬೆಳ್ತಂಗಡಿ; ಕಾಲೇಜು ವಿದ್ಯಾರ್ಥಿನಿಯನ್ನು ತಡೆದು ಹಲ್ಲೆ ಮಾಡಿ, ಕೊಲೆ ಬೆದರಿಕೆ

spot_img
- Advertisement -
- Advertisement -

ಬೆಳ್ತಂಗಡಿ; ಕಾಲೇಜು ವಿದ್ಯಾರ್ಥಿನಿಯನ್ನು ತಡೆದು ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.ಸ್ಥಳೀಯ ನಿವಾಸಿ ಶಂಕರ ದೇವಾಡಿಗ ಎಂಬಾತನ ವಿರುದ್ಧ  ದೂರು ದಾಖಲಾಗಿದೆ.

ಆರೋಪಿ ಶಂಕರ ದೇವಾಡಿಗ ವಿದ್ಯಾರ್ಥಿನಿಯೊಂದಿಗೆ ಕೆಲದಿನಗಳಿಂದ ಅನ್ಯೋನ್ಯವಾಗಿದ್ದ ಎನ್ನಲಾಗಿದೆ. ಈ ವಿಚಾರ ಆಕೆಯ ತಾಯಿಗೆ ತಿಳಿದು‌ ಆತನೊಂದಿಗೆ ಮಾತನಾಡದಂತೆ ಮಗಳಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ‌ನ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಳು ಎನ್ನಲಾಗಿದೆ.

ಇದೇ ಕಾರಣಕ್ಕೆ ಸೆ.12ರಂದು ಸಂಜೆ ಕಾಲೇಜು ಮುಗಿಸಿ ವಿದ್ಯಾರ್ಥಿನಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿರ್ಜನ ಪ್ರದೇಶದಲ್ಲಿ ಕಾದು ನಿಂತಿದ್ದ ಆರೋಪಿ ಶಂಕರ ದೇವಾಡಿಗ ಆಕೆಯ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಕಸಿದುಕೊಂಡು ಅವಾಚ್ಯವಾಗಿ ನಿಂದಿಸಿ, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಲ್ಲದೆ ಬಟ್ಟೆಯನ್ನು ಹರಿದು ನಾಳೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿರುವ ವೇಣೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!