Wednesday, June 3, 2026
Homeಅಪರಾಧಎರಡು ಬೈಕ್ ಗಳ ನಡುವೆ ಡಿಕ್ಕಿ; ಬೈಕ್‌ ಸವಾರ ಗಂಭೀರ ಗಾಯ

ಎರಡು ಬೈಕ್ ಗಳ ನಡುವೆ ಡಿಕ್ಕಿ; ಬೈಕ್‌ ಸವಾರ ಗಂಭೀರ ಗಾಯ

- Advertisement -
- Advertisement -

ನೆಲ್ಯಾಡಿ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು ಬಲ್ಯ ಕ್ರಾಸ್ ಬಳಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿ.

ಈ ಘಟನೆಯಲ್ಲಿ ಬೈಕ್ ಸವಾರ ದಿನೇಶ ಶೆಟ್ಟಿಯವರು ಗಂಭೀರ ಗಾಯಗೊಂಡಿದ್ದು ಅವರಿಗೆ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಾಗಿರುವ ಇನ್ನೋರ್ವ ಬೈಕ್ ಸವಾರ ಕುರಿಯಾಕೋಸ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತದೆ.

ದೋಂತಿಲ ನಿವಾಸಿ ಮಹಾಬಲ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಕುರಿಯಾಕೋಸ್ ಅವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿದ ಪರಿಣಾಮ ಈ ಅಪಘಾತ ನಡೆದಿದೆ ಎಂದು ದೂರು ನೀಡಿದ್ದಾರೆ.

- Advertisement -

Latest News

error: Content is protected !!