- Advertisement -
- Advertisement -
ಶ್ರೀನಗರ: ಕಾಶ್ಮೀರದ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ನಡೆಸಿದ ಎನ್’ಕೌಂಟರ್ನಲ್ಲಿ , ಓರ್ವ ಉಗ್ರರನನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಅವಂತರಿಪೊರಾದ ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಪರಿಣಾಮ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಯೋಧರು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- Advertisement -