Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು...

ಮಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್

- Advertisement -
- Advertisement -

ಮಂಗಳೂರು: ಇಲ್ಲಿನ ಕರಾವಳಿ ಕಾಲೇಜಿನ ವಿದ್ಯಾರ್ಥಿ, ಬೆಂಗಳೂರು ಮೂಲದ ನಿವಾಸಿ ಭರತ್ ಭಾಸ್ಕರ್ (20) ಎಂಬವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೂಕ್ತವಾದ ತನಿಖೆ ನಡೆಸಲಾಗುವುದು ಎಂದು  ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ  ಅವರು, ಆತ್ಮಹತ್ಯೆಗೆ ಕುಮ್ಮಕ್ಕು ಎಂಬ ಬಗ್ಗೆ ಪ್ರಕರಣ ದಾಖಲಾಗಿದ್ದು, ರಾಹುಲ್ ಎಂಬ ಸಿಬ್ಬಂದಿ ಹಾಗೂ ಕಾಲೇಜಿನ ಮುಖ್ಯಸ್ಥ ಗಣೇಶ್ ರಾವ್ ಎಂಬವರ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಪ್ರಕರಣ ತನಿಖೆಯಲ್ಲಿದೆ. ಪೋಸ್ಟ್ ಮಾರ್ಟಂ ಮಾಡಿ ಮೃತದೇಹವನ್ನು ವಿದ್ಯಾರ್ಥಿಯ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆಗೆ ಮುಂಚಿತವಾಗಿ ತಾಯಿಗೆ ಕಳುಹಿಸಿರುವ ವಾಟ್ಸಾಪ್ ಸಂದೇಶ ಹಾಗೂ ಡೆತ್ ನೋಟ್ ಇದ್ದು, ಬೇರೆ ಯಾವ ಕಾರಣಕ್ಕೆ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದಾನೆಂಬ ಎಂಬ ಬಗ್ಗೆ ಕೂಲಂಕುಷ ತನಿಖೆ ನಡೆಸಲಾಗುವುದು ಎಂದಿದ್ದಾರೆ.

- Advertisement -

Latest News

error: Content is protected !!