Sunday, May 19, 2024
Homeಕರಾವಳಿಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕೋರಿಗೆ ಎಚ್ಚರಿಕೆ ಕೊಟ್ಟ ಮಂಗಳೂರು ಪೊಲೀಸ್‌ ಆಯುಕ್ತ

ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕೋರಿಗೆ ಎಚ್ಚರಿಕೆ ಕೊಟ್ಟ ಮಂಗಳೂರು ಪೊಲೀಸ್‌ ಆಯುಕ್ತ

spot_img
- Advertisement -
- Advertisement -

ಮಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕೋರಿಗೆ ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಎಚ್ಚರಿಕೆ ಕೊಟ್ಟಿದ್ದಾರೆ.

ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್ ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್‌ಗಳ ಮೇಲೆ ನಿಗಾ ಇಡಲು “ಸೋಶಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌’ ರಚಿಸಲಾಗಿದೆ. ಇಂತಹ ಸಂದೇಶ ಪೋಸ್ಟ್‌ ಮಾಡುವುದು, ಫಾರ್ವರ್ಡ್‌ ಮಾಡುವುದು, ಲೈಕ್‌, ಕಮೆಂಟ್‌ ಮಾಡುವುದು ಅಪರಾಧವಾಗಿದ್ದು ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ ಮತ್ತು ದ್ವೇಷದ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್‌ ಆಯುಕ್ತರು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!