Wednesday, May 15, 2024
Homeತಾಜಾ ಸುದ್ದಿH3N2 ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ:ಅನಗತ್ಯವಾಗಿ  Antibiotic ಬೇಡ:ಆರೋಗ್ಯ ಸಚಿವ...

H3N2 ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ:ಅನಗತ್ಯವಾಗಿ  Antibiotic ಬೇಡ:ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ.

spot_img
- Advertisement -
- Advertisement -

ಬೆಂಗಳೂರು: H3N2 ಹೊಸ ಸೋಂಕು ಪರೀಕ್ಷೆಯ ದರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಸಮಿತಿ ರಚಿಸಲು ರಾಜ್ಯ ಸರ್ಕಾರ ಸೂಚಿಸಿದ್ದು, ಕಡಿಮೆ ದರದಲ್ಲಿ ಪರೀಕ್ಷೆ ಮಾಡುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.ಸಮಿತಿ ವರದಿ ಬಂದ ಬಳಿಕ ಪರೀಕ್ಷೆಗೆ ದರ ನಿಗದಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಇದೇ ವೇಳೆ ಅನೇಕರು Antibiotic ಮಾತ್ರೆಗಳನ್ನು ಸೇವಿಸುತ್ತಿದ್ದಾರೆ. ವೈದ್ಯರ ಸಲಹೆ ಇಲ್ಲದೇ ಔಷಧಿ ಸೇವಿಸುವುದು, ಅನಗತ್ಯವಾಗಿ Antibiotic ಸೇವಿಸುವುದು ಸರಿಯಲ್ಲ ಎಂದು ತಜ್ಞರು ಹೇಳಿದ್ದಾರೆ ಎಂದೂ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೇಸಿಗೆಯ ಆರಂಭಕ್ಕೆ ಮುನ್ನವೇ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿರುವುದರಿಂದ ಸಮಸ್ಯೆ ಹೆಚ್ಚುತ್ತಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಿಸಿಲಲ್ಲಿ ಓಡಾಡುವುದು ತಪ್ಪಿಸಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದು ಒಳಿತು. ಅಲ್ಲದೇ ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು ಎಂದು ಆರೋಗ್ಯ ಸಚಿವರು ಸಲಹೆ ನೀಡಿದ್ದಾರೆ.

- Advertisement -
spot_img

Latest News

error: Content is protected !!