Sunday, June 7, 2026
Homeಕರಾವಳಿಫಾಜಿಲ್ ಹಂತಕರಿಗೆ ವಿಶೇಷ ಆತಿಥ್ಯ ನೀಡಲಾಗಿಲ್ಲ: ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ

ಫಾಜಿಲ್ ಹಂತಕರಿಗೆ ವಿಶೇಷ ಆತಿಥ್ಯ ನೀಡಲಾಗಿಲ್ಲ: ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ

- Advertisement -
- Advertisement -

ಮಂಗಳೂರು: ಫಾಜಿಲ್ ಹಂತಕರಿಗೆ ವಿಶೇಷ ಆತಿಥ್ಯ ನೀಡಲಾಗಿಲ್ಲ. ಆರೋಪಿಗಳ ಜತೆ ಕಾನೂನಿನ ಅನುಸಾರ ವ್ಯವಹರಿಸಲಾಗಿದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.

ಫಾಜಿಲ್ ಹತ್ಯೆಗೆ ಆರೋಪಿಗಳು ಇನ್ನೂ ಎರಡು ಹೆಚ್ಚುವರಿ ವಾಹನಗಳನ್ನು ಬಳಸಿರುವುದು ಗೊತ್ತಾಗಿದ್ದು ಅವುಗಳನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಆ ರೀತಿ ಯಾವುದೇ ಆರೋಪಿಗೆ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಕೆಲವು ಪ್ರಮುಖರು ಈ ಬಗ್ಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆಂದು ಗೊತ್ತಾಗಿಲ್ಲ ಎಂದಿದ್ದಾರೆ.ಫಾಜಿಲ್ ಕುಟುಂಬದ ಬಹುತೇಕ ಸದಸ್ಯರ ಬಳಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ಫೋನ್ ನಂಬರ್‌ಗಳು ಇವೆ. ಏನಾದರೂ ಅನುಮಾನಗಳು ಇದ್ದಲ್ಲಿ ಗಮನಕ್ಕೆ ತರಬಹುದು. ಮಹಮ್ಮದ್ ಫಾಜಿಲ್ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

- Advertisement -

Latest News

error: Content is protected !!