- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರುನಾಡು ಪ್ರಾ.ಆ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಬಾಳೆಪುನಿ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಶಿಲ್ಪಾರವರು ಅಸೌಖ್ಯದಿಂದಾಗಿ ಇಂದು ಮಂಗಳೂರಿನಲ್ಲಿ ನಿಧನರಾದರು.
ಸಂಪಾಜೆ ಗ್ರಾಮದ ಪಡುಮಜಲು ಮನೆಯವರಾಗಿದ ಶಿಲ್ಪ ತಮ್ಮ ಪತಿ ಅವಿನ್ ಹಾಗೂ 6 ವರ್ಷದ ಹಾಗೂ 8 ತಿಂಗಳ ಪುತ್ರಿಯರೊಂದಿಗೆ ಮಂಗಳೂರಿನಲ್ಲಿ ನೆಲೆಸಿದ್ದರು. ಶಿಲ್ಪಾ ಅವರಿಗೆ 32 ವರ್ಷ ವಯಸ್ಸಾಗಿತ್ತು.
ಶಿಲ್ಪಾ ಅವರು ಕೆಲ ಸಮಯಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರೆನ್ನಲಾಗಿದೆ. ಇವರು ಕೊಲ್ಲಮೊಗ್ರು ಗ್ರಾಮದ ಕಂಚುಗಾರಗದ್ದೆ ಚೆನ್ನಪ್ಪ ಗೌಡ ಎಂಬವರ ಪುತ್ರಿ. ಇವರ ಪತಿ ಅವಿನ್ ಮಂಗಳೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಲ್ಪಾರವರು ಆರೋಗ್ಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ಮೃತರು ಪತಿ, ಇಬ್ಬರು ಪುತ್ರಿಯರು ಹಾಗೂ, ಬಂಧುಗಳನ್ನು ಅಗಲಿದ್ದಾರೆ.
- Advertisement -