Thursday, June 4, 2026
Homeಕರಾವಳಿಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ; ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ; ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

- Advertisement -
- Advertisement -

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲದ ವ್ಯಕ್ತಿಯೊಬ್ಬರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಉಳ್ಳಾಲದ ತೊಕ್ಕೊಟ್ಟು ಕೃಷ್ಣನಗರ ನಿವಾಸಿ ಅಜಿತ್ ಕುಮಾರ್ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಮೇ. 18 ರಂದು ಅವರು ದೂರು ದಾಖಲಿಸಿದ್ದಾರೆ.

ಮೇ 16 ರಂದು ಕೆಲವು ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದ ಪುತ್ತೂರು ಪೊಲೀಸರು ಠಾಣೆಯಲ್ಲಿ ಯುವಕರ ಮೇಲೆ ಹಲ್ಲೆ ನಡೆಸಿ ಹಿಂಸೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೌರ್ಜನ್ಯವೆಸಗಿದ ಪೊಲೀಸರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

- Advertisement -

Latest News

error: Content is protected !!