Monday, April 29, 2024
Homeತಾಜಾ ಸುದ್ದಿಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಕೆ ಅವಧಿ ಜೂನ್ 30 ರವರೆಗೆ...

ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಕೆ ಅವಧಿ ಜೂನ್ 30 ರವರೆಗೆ ವಿಸ್ತರಣೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ನೀಡುವ ಪರಿಹಾರ ಪಡೆಯಲು ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

2022ರ ಮಾರ್ಚ್ 20ಕ್ಕಿಂತ ಮೊದಲು ಮೃತಪಟ್ಟವರ ಪ್ರಕರಣಗಳಲ್ಲಿ ಪರಿಹಾರ ಪಡೆಯಲು ಅವಧಿ ವಿಸ್ತರಣೆ ಮಾಡಲಾಗಿದೆ.

ಜಿಲ್ಲೆಗಳಿಂದ ಮನವಿ ಬಂದಿರುವ ಹಿನ್ನೆಲೆಯಲ್ಲಿ ಮಾರ್ಚ್ 20ಕ್ಕೆ ಅಂತ್ಯವಾಗಿದ್ದ ಅರ್ಜಿ ಸಲ್ಲಿಕೆಯ ಅವಧಿಯನ್ನು 60 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾತ್ರ ವಿಸ್ತರಣೆ ಮಾಡಲಾಗಿದ್ದು, ಉಳಿದಂತೆ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಎಸ್ ಡಿಆರ್ ಎಫ್ ನಿಧಿಯಡಿ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!