Thursday, June 4, 2026
Homeತಾಜಾ ಸುದ್ದಿಹುತಾತ್ಮ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಮೊತ್ತ 50 ಲಕ್ಷ ರೂಪಾಯಿಗೆ ಏರಿಕೆ: ಬೆಂಗಳೂರಿನಲ್ಲಿ ಸಿಎಂ...

ಹುತಾತ್ಮ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ಮೊತ್ತ 50 ಲಕ್ಷ ರೂಪಾಯಿಗೆ ಏರಿಕೆ: ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ಹುತಾತ್ಮ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 50 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಈ ಘೋಷಣೆ ಮಾಡಿದ್ದಾರೆ.ಈ ಹಿಂದೆ ಹುತಾತ್ಮರಾದ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ 20 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೊತ್ತವನ್ನು 30 ಲಕ್ಷ ರೂಪಾಯಿಗಳಿಗೆ ಏರಿಸಲಾಗಿತ್ತು.‌

ಪರಿಹಾರ ಮೊತ್ತವನ್ನು ಇಂದು ಸಿಎಂ ಬೊಮ್ಮಾಯಿ 50 ಲಕ್ಷ ರೂಪಾಯಿಗಳಿಗೆ ಏರಿಸಿದ್ದಾರೆ.ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಸಮಾರಂಭದಲ್ಲಿ ದಿ. ಉಮೇಶ್ ಕತ್ತಿ ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿನ ಇಲಾಖೆಗಳ ಸಾಧನೆಗಳ ಕುರಿತ ಕಿರು ಹೊತ್ತಿಗೆ ಕೂಡಾ ಬಿಡುಗಡೆ ಮಾಡಲಾಯಿತು.

- Advertisement -

Latest News

error: Content is protected !!