Wednesday, June 24, 2026
Homeತಾಜಾ ಸುದ್ದಿಕಾಲ್ತುಳಿತ ಪ್ರಕರಣದಲ್ಲಿ ಸಿಎಂ, ಡಿಸಿಎಂ ಮತ್ತು ಗೃಹ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ...

ಕಾಲ್ತುಳಿತ ಪ್ರಕರಣದಲ್ಲಿ ಸಿಎಂ, ಡಿಸಿಎಂ ಮತ್ತು ಗೃಹ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ದೂರು

- Advertisement -
- Advertisement -

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ದೂರು ದಾಖಲಾಗಿದೆ.ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ದೂರು ಸಲ್ಲಿಸಿದ್ದಾರೆ.

ಅಮಾಯಕರ ಸಾವಿಗೆ ಕಾರಣ ಮತ್ತು ಸಾರ್ವಜನಿಕ ಹಣ ದುರ್ಬಳಕೆ ಆರೋಪದಡಿ ಮೂವರ ವಿರುದ್ಧ ಎಫ್ ಐಆರ್ ದಾಖಲಿಸಿ ಕ್ರಮ ಜರುಗಿಸುವಂತೆ ದೂರು ನೀಡಲಾಗಿದೆ. ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!