Friday, June 5, 2026
Homeಕೊಡಗುಚುನಾವಣೆಯಲ್ಲಿ ಸ್ಪರ್ಧಿಸಲು ವಯಸ್ಸಿನ ಸುಳ್ಳು ದಾಖಲೆ ನೀಡಿದ ಆರೋಪ; ವಿರಾಜಪೇಟೆ  ಶಾಸಕ ಕೆ.ಜಿ ಬೋಪಯ್ಯ ವಿರುದ್ಧ...

ಚುನಾವಣೆಯಲ್ಲಿ ಸ್ಪರ್ಧಿಸಲು ವಯಸ್ಸಿನ ಸುಳ್ಳು ದಾಖಲೆ ನೀಡಿದ ಆರೋಪ; ವಿರಾಜಪೇಟೆ  ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು ದಾಖಲು

- Advertisement -
- Advertisement -

ಡಿಕೇರಿ: ಚುನಾವಣೆಯಲ್ಲಿ ಸ್ಪರ್ಧಿಸಲು ವಯಸ್ಸಿನ ಸುಳ್ಳು ದಾಖಲೆ ನೀಡಿದ ಆರೋಪದಡಿ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರ ವಿರುದ್ಧ ದೂರು ದಾಖಲಾಗಿದೆ. ತಿಮ್ಮಯ್ಯ ಎಂಬವರು ಕೆ ಜಿ ಬೋಪಯ್ಯ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬೋಪಯ್ಯ ತಮ್ಮ ವಯಸ್ಸನ್ನು ತಿದ್ದಿ, ತಪ್ಪು ಮಾಹಿತಿ ನೀಡಿ ನಾಮಪತ್ರ ಸಲ್ಲಿಸಿದ್ದರು ಎಂದಿದ್ದಾರೆ.

ವಿರಾಜಪೇಟೆ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಕೆ.ಜಿ ಬೋಪಯ್ಯ 26.10.1979ರಲ್ಲಿ ಬಾರ್ ಕೌನ್ಸಿಲ್ ವಕೀಲರಾಗಿದ್ದರು. ಅವರು ಆಗ ತಮ್ಮ ಹುಟ್ಟಿದ ದಿನಾಂಕವನ್ನು 1951 ಅಕ್ಟೋಬರ್ 17 ಎಂದು ದಾಖಲಿಸಿದ್ದರು. ಆದರೆ ಬೋಪಯ್ಯನವರು 2004 ನೇ ಸಾಲಿನ ಚುನಾವಣೆ ಸಮಯದಲ್ಲಿ ಅವರ ವಯಸ್ಸು 53 ವರ್ಷ ಆಗಿತ್ತು. ಆದರೆ ಬೋಪಯ್ಯನವರು ತಮ್ಮ ವಯಸ್ಸನ್ನು 49 ವರ್ಷ ಎಂದು ಸುಳ್ಳು ಮಾಹಿತಿ ನೀಡಿದ್ದರು. 2018ರ ಚುನಾವಣೆಯಲ್ಲಿ ಅವರ ವಯಸ್ಸು 67 ಆಗಿತ್ತು. ಆದರೆ ತಮ್ಮ ವಯಸ್ಸನ್ನು 65 ಎಂದು ಸುಳ್ಳು ಮಾಹಿತಿ ನೀಡಿದ್ದಾರೆಂದು ತಿಮ್ಮಯ್ಯ ಆರೋಪಿಸಿದ್ದಾರೆ.

- Advertisement -

Latest News

error: Content is protected !!