Wednesday, July 15, 2026
Homeಕರಾವಳಿಇನ್ಸ್ಟಾಗ್ರಾಮ್ ಮೂಲಕ ಸವಣೂರಿನ ಬಾಲಕಿಗೆ ಕಿರುಕುಳ: ಮೆಸ್ಕಾಂ ಸಿಬ್ಬಂದಿ ವಿರುದ್ಧ ದೂರು ದಾಖಲು

ಇನ್ಸ್ಟಾಗ್ರಾಮ್ ಮೂಲಕ ಸವಣೂರಿನ ಬಾಲಕಿಗೆ ಕಿರುಕುಳ: ಮೆಸ್ಕಾಂ ಸಿಬ್ಬಂದಿ ವಿರುದ್ಧ ದೂರು ದಾಖಲು

- Advertisement -
- Advertisement -

ಬೆಳ್ಳಾರೆ:ಇನ್ಸ್ಟಾಗ್ರಾಮ್ ಮೂಲಕ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಮೆಸ್ಕಾಂ ಸಿಬ್ಬಂದಿ ಸೊಯೂಬ್ ಕೊತ್ವಾಲ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಸವಣೂರು ಗ್ರಾಮದ ಮಣೆಮಜಲು ನಿವಾಸಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಮೆಸ್ಕಾಂ ಉದ್ಯೋಗಿ ಸೊಯೂಬ್ ಕೊತ್ವಾಲ್ ಎಂಬಾತ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಇನ್ಸ್ಟಾಗ್ರಾಂ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ ಸೊಯೂಬ್, ಆಕೆಗೆ ತನ್ನನ್ನು ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ, ಬಳಿಕ ಅಸಭ್ಯವಾಗಿ ಸಂದೇಶ ಕಳುಹಿಸುತ್ತಿದ್ದಾನೆ. ಅಲ್ಲದೇ ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ರೀತಿಯಾಗಿ ಕಳೆದ ನಾಲ್ಕು ತಿಂಗಳುಗಳಿಂದ ಒತ್ತಡ ಹೇರುತ್ತಿದ್ದ.  ಕಿರುಕುಳದಿಂದ ಬೇಸತ್ತ ಬಾಲಕಿ ಕೊನೆಗೆ ತನ್ನ ತಾಯಿಗೆ ವಿಚಾರವನ್ನು ತಿಳಿಸಿದ್ದಾಳೆ. ಬಳಿಕ ಬಾಲಕಿಯ ಹೆತ್ತವರು ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Latest News

error: Content is protected !!