Sunday, May 5, 2024
Homeಕರಾವಳಿಸರ್ಕಾರದ ಆದೇಶ ಉಲ್ಲಂಘಿಸಿ ಜಾತ್ರೆ ಆಚರಣೆ ಆರೋಪ: ಉಳ್ಳಾಲದ ಸೋಮೇಶ್ವರ ದೇವಸ್ಥಾನ ಆಡಳಿತ ಸಮಿತಿಯ ವಿರುದ್ಧ...

ಸರ್ಕಾರದ ಆದೇಶ ಉಲ್ಲಂಘಿಸಿ ಜಾತ್ರೆ ಆಚರಣೆ ಆರೋಪ: ಉಳ್ಳಾಲದ ಸೋಮೇಶ್ವರ ದೇವಸ್ಥಾನ ಆಡಳಿತ ಸಮಿತಿಯ ವಿರುದ್ಧ ದೂರು

spot_img
- Advertisement -
- Advertisement -

ಉಳ್ಳಾಲ: ಸರ್ಕಾರದ ಆದೇಶ ಉಲ್ಲಂಘಿಸಿ ದೇವಸ್ಥಾನದ ಜಾತ್ರೋತ್ಸವ ನಡೆಸಿದೆ ಎಂಬ ಆರೋಪದ ಮೇರೆಗೆ ಉಳ್ಳಾಲದ ಸೋಮೇಶ್ವರ ದೇವಸ್ಥಾನ ಆಡಳಿತ ಸಮಿತಿಯ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮೇಶ್ವರ ದೇವಸ್ಥಾನದಲ್ಲಿ ಈಗ ಬ್ರಹ್ಮಕಲಶೋತ್ಸವದ ಸಂಭ್ರಮ ನಡೆಯುತ್ತಿದ್ದು, ಸರ್ಕಾರದ ಆದೇಶ ಪಾಲಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದರು. ಆದರೆ ನಿನ್ನೆ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾವಿರಾರು ಜನರು ಭಾಗಿಯಾಗಿದ್ದರು ಎನ್ನಲಾಗಿದೆ.

ಆದರೆ ಈ ಕುರಿತು ಮುನ್ನೆಚ್ಚರಿಕೆಯಾಗಿ ಮೂರು ದಿನಗಳ ಹಿಂದೆಯೇ ಮಂಗಳೂರು ತಹಶೀಲ್ದಾರ್ ದೇವಸ್ಥಾನಕ್ಕೆ ನೋಟೀಸ್ ನೀಡಿದ್ದರು. ಆದರೆ ಅದನ್ನು ಗಣನೆಗೆ ತೆಗೆದುಕೊಳ್ಳದೆ ದೇವಸ್ಥಾನ ಆಡಳಿತ ಸಮಿತಿಯು ಸಾರ್ವಜನಿಕ ಮೆರವಣಿಗೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನ ಆಡಳಿತ ಸಮಿತಿಯ ವಿರುದ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ, ಐಪಿಸಿ ಸೆಕ್ಷನ್ 269ರಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!