
ಮಂಗಳೂರು: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಪರಾಧಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ದೂರು ದಾಖಲಾಗಿದೆ.
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಹಾಗೂ ಮಹಿಳಾ ಮೋರ್ಛಾ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ.
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದ್ದು, ಬಿಜೆಪಿ ನಾಯಕರು ಕೂಡಲೇ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನೀಲ್ ಕುಮಾರ್, ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಸೇರಿದಂತೆ ಹಲವರು ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಶಾಸಕ ಮತ್ತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಶಾಸಕಿ ಭಾಗೀರಥಿ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ


