Friday, May 17, 2024
Homeಅಪರಾಧಹೆಂಡತಿಯ ಮುಂದೆಯೇ ಬಯಲಾಯ್ತು ಪತಿಯ ನಿಜ ಮುಖ : ವಿದ್ಯಾರ್ಥಿನಿ ಜೊತೆಗಿರುವಾಗಲೇ ಸಿಕ್ಕಿಬಿದ್ದ ಪ್ರೊಫೆಸರ್

ಹೆಂಡತಿಯ ಮುಂದೆಯೇ ಬಯಲಾಯ್ತು ಪತಿಯ ನಿಜ ಮುಖ : ವಿದ್ಯಾರ್ಥಿನಿ ಜೊತೆಗಿರುವಾಗಲೇ ಸಿಕ್ಕಿಬಿದ್ದ ಪ್ರೊಫೆಸರ್

spot_img
- Advertisement -
- Advertisement -

ಮೈಸೂರು:  ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿ ಹಾಕಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಅವರೇ ಆರೋಪಿ. ಇವರು ತಮ್ಮಿಂದ ಮಾರ್ಗದರ್ಶನ ಪಡೆಯುತ್ತಿದ್ದ ಪಿಎಚ್​ಡಿ ವಿದ್ಯಾರ್ಥಿನಿಯನ್ನೇ ಮನೆಗೆ ಕರೆಸಿಕೊಂಡಿದ್ದಾರೆ. ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನವಾಗಿದ್ದು, ವಿದ್ಯಾರ್ಥಿನಿ ತಪ್ಪಿಸಿಕೊಳ್ಳುವ ಸಲುವಾಗಿ ಕೂಗಾಟ-ಚೀರಾಟ ನಡೆಸಿದ್ದಳು.

ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ರಾಮಚಂದ್ರ ರೆಡ್ ಹ್ಯಾಂಡೆಡ್​ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಜಯಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದಾಳೆ. ಸಂತ್ರಸ್ತೆ ಹಾಗೂ ಪತಿಯನ್ನು ಲೋಲಾಕ್ಷಿ ಠಾಣೆಗೆ ಕರೆದುಕೊಂಡು ಬಂದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯ ಪತ್ನಿ ಲೋಲಾಕ್ಷಿ ಕೂಡ ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!