Saturday, May 25, 2024
Homeಕರಾವಳಿಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ  ಶ್ರೀನಿವಾಸ್ ಗೌಡ ವಿರುದ್ದ ದೂರು ದಾಖಲು

ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ  ಶ್ರೀನಿವಾಸ್ ಗೌಡ ವಿರುದ್ದ ದೂರು ದಾಖಲು

spot_img
- Advertisement -
- Advertisement -

ಮಂಗಳೂರು: ಕಂಬಳದ ಉಸೇನ್ ಬೋಲ್ಟ್  ಶ್ರೀನಿವಾಸ್ ಗೌಡ ಹಾಗೂ ಇನ್ನಿಬ್ಬರ ವಿರುದ್ಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ,ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು  ದೂರು ನೀಡಿದ್ದಾರೆ. ಕಂಬಳ ಓಟಗಾರ ಶ್ರೀನಿವಾಸ ಗೌಡ, ಗುಣಪಾಲ ಕಡಂಬ ಮತ್ತು ರತ್ನಾಕರ ಎಂಬವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಕಂಬಳ ಅಕಾಡೆಮಿ ನಡೆಸುತ್ತಿರುವ ಗುಣಪಾಲ ಕಡಂಬ ಅವರು ಶ್ರೀನಿವಾಸ ಗೌಡ ಬಳಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ಲಕ್ಷಾಂತರ ಹಣ ಸಂಗ್ರಹವಾಗಿದ್ದು, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆಂದು‌ ಲೋಕೇಶ್ ಶೆಟ್ಟಿ ಆರೋಪಿಸಿದ್ದಾರೆ.

ಇನ್ನು‌ ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ್ ವಿರುದ್ದ ಕೂಡ  ದೂರು ದಾಖಲಾಗಿದೆ. ಅಧಿಕೃತ ಮಾನ್ಯತೆ ಪಡೆಯದ, ನಂಬಲಾರ್ಹವಲ್ಲದ ಸ್ಕೈ ವೀವ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ  ಸೃಷ್ಟಿಸಲಾಗಿದೆ.  ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡೋದಾಗಿ‌ ಲೋಕೇಶ್ ಹೇಳಿದ್ದಾರೆ.

2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್ ನಲ್ಲಿ ಕ್ರಮಿಸಿದ್ದ ಶ್ರೀನಿವಾಸ ಗೌಡ ಉಸೆನ್‌ ಬೋಲ್ಟ್  ದಾಖಲೆ ಮುರಿದಿದ್ದರು.

- Advertisement -
spot_img

Latest News

error: Content is protected !!