- Advertisement -
![]()
- Advertisement -
ಬೆಂಗಳೂರು; ನಿರ್ದೇಶಕರೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಮದುವೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿರುತೆರೆ ಹಿರಿಯ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪ್ರಜಾರಾಜ್ಯ ಚಿತ್ರದ ನಿರ್ದೇಶಕ ಹರ್ಷವರ್ಧನ್ ಅವರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಶಶಿಕಲಾ ವಿರುದ್ಧ ದೂರು ದಾಖಲಿಸಿದ್ದಾರೆ. ಶಶಿಕಲಾ ಬ್ಲಾಕ್ ಮೇಲ್ ಮಾಡಿ ಮದುವೆಯಾಗಿದ್ದು, ದೂರವಿದ್ದರೂ ಕೂಡ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.
ನನ್ನನ್ನು ಸಿನಿಮಾಗೆ ಹಣ ಹೂಡಿಕೆ ಮಾಡೋದಾಗಿ ನಂಬಿಸಿ ಮದುವೆಯಾದರು. ಆ ಬಳಿಕ ಯಾವುದಾದರೂ ವಿಚಾರಕ್ಕೆ ಪ್ರಶ್ನೆ ಮಾಡಿದ್ರೆ ನನಗೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಿರ್ದೇಶಕರ ಹರ್ಷವರ್ಧನ್ ದೂರಿನ ಅನ್ವಯ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕನ್ನಡದ ಕಿರುತೆರೆ ಹಿರಿಯ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
- Advertisement -


