Thursday, June 27, 2024
Homeಕರಾವಳಿಮಂಗಳೂರುಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲು

ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಲೋಕಸಭೆ ಹಾಗೂ  ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು  ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಚೇರಿಯಲ್ಲಿ ನೀರು ಪೂರೈಕೆ ಅಧಿಕಾರಿಗಳ ಸಭೆ ಕರೆದಿದ್ದರು. ಈ ಸಭೆಗೆ ಚುನಾವಣಾ ಅಧಿಕಾರಿಗಳು ಆಗಮಿಸಿದ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಸೂಚನೆ ನೀಡಿದರು.ಆದರೆ ಶಾಸಕರು ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಚುನಾವಣಾಧಿಕಾರಿಗಳು ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ನೀವು ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಮನವಿ ಮಾಡಿದರು. ಕಛೇರಿಯಿಂದ ಶಾಸಕರನ್ನು ಮತ್ತು ಕಛೇರಿ‌ ಸಿಬ್ಬಂದಿಯನ್ನು ಅಧಿಕಾರಿಗಳು ಹೊರಗೆ ಕಳುಹಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡದಿಂದ ಶಾಸಕರಿಗೆ ಸೂಚನೆ ನೀಡಿದ್ದು, ಇದೀಗ ಶಾಸಕ ಅಶೋಕ್ ಕುಮಾರ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!