Sunday, May 19, 2024
Homeಕರಾವಳಿವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸುದ್ದಿ ಹರಿಡಿಸುತ್ತಿದ್ದ ಆರೋಪ; ಬದಿಕೋಡಿ ವೆಂಕಟೇಶ್‌ ಕುಮಾರ್‌ ಭಟ್ ವಿರುದ್ಧ...

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸುದ್ದಿ ಹರಿಡಿಸುತ್ತಿದ್ದ ಆರೋಪ; ಬದಿಕೋಡಿ ವೆಂಕಟೇಶ್‌ ಕುಮಾರ್‌ ಭಟ್ ವಿರುದ್ಧ ದೂರು

spot_img
- Advertisement -
- Advertisement -

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ವ್ಯಕ್ತಿಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಕಾರಿ ಹೇಳಿಕೆ ಮತ್ತು ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ಕನ್ಯಾನ ಗ್ರಾಮದ ಬದಿಕೋಡಿ ವೆಂಕಟೇಶ್‌ ಕುಮಾರ್‌ ಭಟ್ ಇವರ ಮೇಲೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುರ್ಷ್ಕಮಿಗಳಿಂದ ಹತ್ಯೆಯಾದ ಶರತ್ ಮಡಿವಾಳ, ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಮಸೂದ್, ಫಾಝಿಲ್, ಕಬೀರ್, ಪ್ರವೀಣ್‌ ನೆಟ್ಟಾರು ಇವರ ಹತ್ಯೆಯನ್ನು ಮುಂದಿಟ್ಟುಕೊಂಡು ಬಂಟ್ವಾಳ ತಾಲೂಕು ಕನ್ಯಾನ ಗ್ರಾಮ ಮತ್ತು ಅಂಚೆ ವ್ಯಾಪ್ತಿಯ ಬದಿಕೋಡಿ ವೆಂಕಟೇಶ್‌ ಕುಮಾರ್‌ ಭಟ್ ಇವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಮತ್ತು ವಾಟ್ಸಾಪ್ ಗ್ರೂಪ್ ನಲ್ಲಿ ಕೋಮು ಪ್ರಚೋದನಕಾರಿ ಹೇಳಿಕೆ ಮತ್ತು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿಸುತ್ತಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಮತ್ತು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರನ್ನು ವೈಯಕ್ತಿಕವಾಗಿ ನಿಂದಿಸಿ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿ ಮತ್ತು ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಕೋಮು ಪ್ರಚೋದನಕಾರಿ ಹೇಳಿಕೆ ಮತ್ತು ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ ಎಂದು ಪಾಣೆ ಮಂಗಳೂರು ಬ್ಲಾಕ್‌ ಅಧ್ಯಕ್ಷರಾದ ಸುದೀಪ್‌ ಕುಮಾರ್‌ ಶೆಟ್ಟಿ ಗುರುವಾರ ದೂರು ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!