Monday, April 29, 2024
Homeಕರಾವಳಿಬೆಳ್ತಂಗಡಿ : ಕಳೆಂಜದ ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಪ್ರಕರಣ;ಮನೆ ಮಾಲೀಕ ಲೋಲಾಕ್ಷ...

ಬೆಳ್ತಂಗಡಿ : ಕಳೆಂಜದ ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ ಪ್ರಕರಣ;ಮನೆ ಮಾಲೀಕ ಲೋಲಾಕ್ಷ ವಿರುದ್ಧ ಉಪ್ಪಿನಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

spot_img
- Advertisement -
- Advertisement -

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನೂತನ ಮನೆ ನಿರ್ಮಾಣ ಮಾಡಿದ ಮಾಲೀಕ ಲೋಲಾಕ್ಷ ವಿರುದ್ಧ ಉಪ್ಪಿನಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿ‌ಡ್ಕ ಕುದ್ದಮನೆ ಸೇಸ ಗೌಡ ಎಂಬವರ ಕುಟುಂಬ ಸುಮಾರು 150  ವರ್ಷದ ಹಿಂದೆ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ಅ.6 ರಂದು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತೆಸಗಿತ್ತು.

ಘಟನೆ ವಿಚಾರ ತಿಳಿದು ಅ.7 ರಂದು ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅರಣ್ಯಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಸ್ಥಳದಲ್ಲೆ ಶೆಡ್ ನಿರ್ಮಾಣಕ್ಕೆ ಮುಂದಾದರು. ಈ ವೇಳೆ ಅರಣ್ಯ ಇಲಾಖೆ ಮತ್ತು ಶಾಸಕರ ಮಧ್ಯೆ ಗಂಭೀರ ಮಾತಿನ ಚಕಮಖಿಗೆ ಕಾರಣವಾಯಿತು.

309 ಸರ್ವೇ ನಂಬರಿನಲ್ಲಿ ಶಾಸಕರ ಸಮ್ಮುಖದಲ್ಲಿ ಊರವರೊಡಗೂಡಿ ತಾತ್ಕಾಲಿಕ ಶೆಡ್ ನಿರ್ಮಿಸಿದರು. ಇದಕ್ಕೆ ಅಡ್ಡಿ ಪಡಿಸುವ ಮೊದಲು ಕಂದಾಯ ಇಲಾಖೆ ಹಾಗೂ ಅರಣ್ಯ ಜಂಟಿ ಸರ್ವೇ ನಡೆಸಿ ಬಳಿಕ ತೆರವುಗೊಳಿಸಿ ಎಂದು ಸೂಚಿಸಿದರು.ಇದೀಗ ಉಪ್ಪಿನಂಗಡಿ ವಲಯ ಅರಣ್ಯಧಿಕಾರಿ ಜಯಪ್ರಕಾಶ್ ಕೆಕೆ ಅವರ ನೀಡಿದ ದೂರಿನ ಹಿನ್ನಲೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿದ ಕಾರಣ 24GG ಅರಣ್ಯ ಕಾಯ್ದೆ ಅಡಿಯಲ್ಲಿ ಮನೆ ಕಟ್ಟಿದ ಮಾಲೀಕ ಲೋಲಾಕ್ಷ ವಿರುದ್ಧ ಪ್ರಕರಣ ದಾಖಲಿಸಿ ಬೆಳ್ತಂಗಡಿ ಕೋರ್ಟ್ ಗೆ ವರದಿಯನ್ನು ನೀಡಿದ್ದಾರೆ.

- Advertisement -
spot_img

Latest News

error: Content is protected !!