Friday, July 19, 2024
Homeಕರಾವಳಿಬೆಳ್ತಂಗಡಿ :ಸಿ.ಎಂ.ಸಿದ್ದರಾಮಯ್ಯ ಬಗ್ಗೆ ಅಶ್ಲೀಲ ಆಡಿಯೋ ವೈರಲ್ : ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ...

ಬೆಳ್ತಂಗಡಿ :ಸಿ.ಎಂ.ಸಿದ್ದರಾಮಯ್ಯ ಬಗ್ಗೆ ಅಶ್ಲೀಲ ಆಡಿಯೋ ವೈರಲ್ : ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

spot_img
- Advertisement -
- Advertisement -

ಬೆಳ್ತಂಗಡಿ : ಸಿ.ಎಂ ಸಿದ್ದರಾಮಯ್ಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಅಗಿದ್ದು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿಯಾಗಿರುವ ವೃತ್ತಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸ ಮಾಡುವ ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಬಗ್ಗೆ ಅಶ್ಲೀಲವಾಗಿ ನಿಂದಿಸಿ ಮಾತಾನಾಡಿರುವ ಆಡಿಯೋ ಹರಿಯಬಿಟ್ಟಿದ್ದು ಇದರ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತ ಹಕಿಮ್ ಕೊಕ್ಕಡ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಮೇಲೆ ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಮ್ ಕೊಕ್ಕಡ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿದೇವ್ ಅರಿಗ, ಯುವ ಇಂಟಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಗೌಡ ಸವಣಾಲು, ಸುಧೀರ್ ದೇವಾಡಿಗ, ರಬಿನ್,ಮೋಹಿತ್ ಜೊತೆಯಲ್ಲಿದ್ದರು.

- Advertisement -
spot_img

Latest News

error: Content is protected !!