Friday, June 5, 2026
Homeಕರಾವಳಿಉಡುಪಿಉಡುಪಿ : ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಆರೋಪ; ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ...

ಉಡುಪಿ : ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಆರೋಪ; ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಡುಪಿ : ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಆರೋಪದಡಿ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಶ್ವಹಿಂದೂ ಪರಿಷತ್ ಭಜರಂಗದಳ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ಮೇಲೆ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಹಾಗೂ ಭಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದ ಪಾಕಿರ್ಂಗ್ ಏರಿಯಾದಲ್ಲಿ ಗುರುವಾರ ವಿಹೆಚ್‍ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮಾತನಾಡಿದ್ದ ಈ ಇಬ್ಬರು ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.


ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ ವೆಲ್ ಕರೆ ನೀಡಿದ್ದರು. ಅಲ್ಲದೇ ವೀಣಾ ಶೆಟ್ಟಿ ಪ್ರತಿಭಟನೆ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎನ್ನುವ ಮೂಲಕ ಪ್ರಚೋದನಕಾರಿ ಮಾತಾಡಿದ್ದ ಹಿನ್ನಲೆ ಎಫ್​ಐಆರ್​ ದಾಖಲಾಗಿದೆ. ಜೊತೆಗೆ ವೀಣಾ ಶೆಟ್ಟಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ಕೂಡ ಹಾಕಲಾಗಿದೆ.

- Advertisement -

Latest News

error: Content is protected !!