Friday, June 5, 2026
Homeಕರಾವಳಿಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ, ಭಜರಂಗ ದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ವಿಟ್ಲ ಠಾಣೆಯಲ್ಲಿ...

ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ, ಭಜರಂಗ ದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ವಿಟ್ಲ ಠಾಣೆಯಲ್ಲಿ  ದೂರು ಪ್ರತಿದೂರು ದಾಖಲು

- Advertisement -
- Advertisement -

ಬಂಟ್ವಾಳ: ಮಾಣಿ ಜಂಕ್ಷನ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಭಜರಂಗ ದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಬುಧವಾರ ದೂರು ಪ್ರತಿದೂರು ದಾಖಲಾಗಿದೆ.ಕಾಂಗ್ರೆಸ್ ಕಾರ್ಯಕರ್ತರಾದ ರಾಕೇಶ್, ಮಂಜುನಾಥ್, ರಾಜೇಶ್ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತ ಮಾಣಿ ಕೊಡಾಜೆ ನಿವಾಸಿ ಮಹೇಂದ್ರ (26) ಗಾಯಾಳು.

ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಅನಂತಾಡಿ ಕರಿಂಕ ನಿವಾಸಿ ಈಶ್ವರ ನಾಯ್ಕ ಯಾನೆ ಪ್ರವೀಣ್ ನಾಯ್ಕ (28)ಗೆ ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಮಹೇಂದ್ರ, ಪ್ರಶಾಂತ್, ಚರಂಜೀವಿ, ಪ್ರವೀಣ್ , ದೇವಿಪ್ರಸಾದ್, ಹರೀಶ್ ವಿರುದ್ಧ ದೂರು ನೀಡಲಾಗಿದೆ.

- Advertisement -

Latest News

error: Content is protected !!