- Advertisement -
- Advertisement -
ಮಂಗಳೂರು : ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಎಂಎಲ್ಸಿ ಐವನ್ ಡಿಸೋಜಾ ನೇತೃತ್ವದ ನಿಯೋಗ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ಗೆ ದೂರು ನೀಡಿದ್ದು ಎಫ್ಐಆರ್ ದಾಖಲಿಸಿ ಭರತ್ ಶೆಟ್ಟಿಯನ್ನು ಬಂಧಿಸಲು ನಿಯೋಗ ಒತ್ತಾಯಿಸಿದೆ.
ಮಂಗಳೂರಿನ ಕಾವೂರಿನಲ್ಲಿ ನಿನ್ನೆ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಭರತ್ ಶೆಟ್ಟಿ, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ರಾಹುಲ್ ಗಾಂಧಿ ಶಿವನ ಫೋಟೋ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲ ಎಂದಿದ್ದರು. ಈ ಹಿನ್ನಲೆ ಐವನ್ ಡಿಸೋಜಾ ನೇತೃತ್ವದ ನಿಯೋಗ ಭರತ್ ಶೆಟ್ಟಿ ವಿರುದ್ಧ ದೂರು ನೀಡಿದೆ.
- Advertisement -