Wednesday, May 8, 2024
Homeತಾಜಾ ಸುದ್ದಿತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು

ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು

spot_img
- Advertisement -
- Advertisement -

ಬೆಂಗಳೂರು: ನಗರತ್‌ಪೇಟೆಯಲ್ಲಿನ ಮೊಬೈಲ್ ಅಂಗಡಿಯೊಂದರಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಅಂಗಡಿ ಮಾಲಿಕನ ಮೇಲೆಯೇ ಹಲ್ಲೆ ನಡೆಸಿದ್ದನ್ನು ಖಂಡಿಸಿ ಘಟನೆ ನಡೆದ ಸ್ಥಳದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ರ್‍ಯಾಲಿ ನಡೆಸಿದರು. 

ಘಟನಾ ಸ್ಥಳಕ್ಕೆ ಆಗಮಿಸಿದ್ದ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಚುನಾವಣಾ ಆಯೋಗದ ಪ್ರಕಾರ, ಚುನಾವಣೆಯ ಸಂದರ್ಭದಲ್ಲಿ ಕೋಮು, ಮತ, ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಕೃತ್ಯವೆಸಗುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕೆಪಿಸಿಸಿ ಕಾನೂನು ಘಟಕವು ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ. 

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಅವರು ಮಾರ್ಚ್ 18 ರಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಅಂಗಡಿಯ ಮುಂದೆ ಗುಂಪು ಸೇರಿಸಿ ಇಂದು (ಮಾ.19) ಮಧ್ಯಾಹ್ನ 12 ಗಂಟೆಗೆ ಹನುಮಾನ್ ಚಾಲೀಸ ಪಠಣೆ ಮಾಡಲು ಕರೆ ನೀಡಿದ್ದಾರೆ. ಅಲ್ಲದೇ ಧಾರ್ಮಿಕ ಘೋಷಣೆಗಳನ್ನು ಕೂಗಿರುತ್ತಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!