Wednesday, June 24, 2026
Homeಕರಾವಳಿಮಂಗಳೂರುಫೇಸ್ ಬುಕ್ ಪೇಜ್ ನಲ್ಲಿ ಹಿಂದೂ ದೇವತೆಗಳಿಗೆ ಅವಮಾನ ಆರೋಪ; ಹಿಂದೂ ಜನ ಜಾಗೃತಿ ಸಮಿತಿಯಿಂದ...

ಫೇಸ್ ಬುಕ್ ಪೇಜ್ ನಲ್ಲಿ ಹಿಂದೂ ದೇವತೆಗಳಿಗೆ ಅವಮಾನ ಆರೋಪ; ಹಿಂದೂ ಜನ ಜಾಗೃತಿ ಸಮಿತಿಯಿಂದ ಉರ್ವ ಠಾಣೆಗೆ ದೂರು

- Advertisement -
- Advertisement -

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.

ಫ್ಯಾಕ್ಟ್ ವಿದ್ ಎಂಬ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ ಹಿಂದೂ ಜನಜಾಗೃತಿ ಸಮಿತಿಯಿಂದ ಉರ್ವ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

ಫೇಸ್ ಬುಕ್ ಪೇಜ್ ನಲ್ಲಿ ಎಐ ಆಧಾರಿತವಾಗಿ ಹಿಂದೂ ದೇವರುಗಳ ಚಿತ್ರ ರಚಿಸಿ ಹಿಂದೂ ದೇವತೆಗಳ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಫೋಟೋಗಳಿಗೆ ಧಾರ್ಮಿಕ ಭಾವನೆಗಳಿಗೆ ನೋವುಂಟಾಗುವಂತಹ ರೀತಿಯಲ್ಲಿ ಕಮೆಂಟ್ ಗಳನ್ನು ಮಾಡಲಾಗುತ್ತಿದ್ದು
ಈ ಮೂಲಕ ದಕ್ಷಿಣ‌ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಫೇಸ್ ಬುಕ್ ಪೇಜ್ ಅಡ್ಮಿನ್ ಮತ್ತು ಕಮೆಂಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದ್ದು, ಉರ್ವ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ

- Advertisement -

Latest News

error: Content is protected !!