Friday, May 3, 2024
Homeತಾಜಾ ಸುದ್ದಿಕೊರೊನಾ ಪಾಸಿಟಿವ್ ಇದ್ದವರಿಗೆ 7 ದಿನ ಹೋಮ್ ಐಸೋಲೇಷನ್ ಕಡ್ಡಾಯವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೊರೊನಾ ಪಾಸಿಟಿವ್ ಇದ್ದವರಿಗೆ 7 ದಿನ ಹೋಮ್ ಐಸೋಲೇಷನ್ ಕಡ್ಡಾಯವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

spot_img
- Advertisement -
- Advertisement -

ಬೆಂಗಳೂರು: ಕೊರೊನಾ ಪಾಸಿಟಿವ್ ಇದ್ದವರಿಗೆ 7 ದಿನ ಹೋಮ್ ಐಸೋಲೇಷನ್ ಕಡ್ಡಾಯವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಅಲ್ಲದೇ ಕೋವಿಡ್ ಸೋಂಕಿತರ ಮನೆಗಳಿಗೆ ಸರಕಾರಿ ವೈದ್ಯರು ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು.ಮನೆಯಲ್ಲೇ ಸೂಕ್ತ ಆರೈಕೆಗೆ ಮಾರ್ಗಸೂಚಿ ಹೊರಡಿಸಬೇಕು ಎಂದರು.

ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ 7 ದಿನ ಹೋಮ್ ಐಸೊಲೇಷನ್ʼನಲ್ಲಿ ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ, ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ 7 ದಿನಗಳ ರಜೆ ಕೊಡಬೇಕು. ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ ಕೊಡಿಸುವ ಕುರಿತು ಸರಕಾರದಿಂದ ಮಾರ್ಗಸೂಚಿ ಹೊರಡಿಸಬೇಕು ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ರಚನೆ ಮಾಡಬೇಕು. ಇಲ್ಲಿನ ವಿಕ್ಟೋರಿಯಾ, ಮತ್ತು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ಮಾಡಬೇಕು. ಐಸಿಯು ಬೆಡ್, ಹಾಗೂ ಐಸೊಲೇಷನ್ ಬೆಡ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅವರು ಹೇಳಿದರು.

- Advertisement -
spot_img

Latest News

error: Content is protected !!