Sunday, May 5, 2024
Homeತಾಜಾ ಸುದ್ದಿ200 ಯೂನಿಟ್ ವಿದ್ಯುತ್ ಉಚಿತ ಪಡೆಯಲು ಷರತ್ತುಗಳನ್ನು ವಿಧಿಸಿದ ರಾಜ್ಯ ಸರ್ಕಾರ

200 ಯೂನಿಟ್ ವಿದ್ಯುತ್ ಉಚಿತ ಪಡೆಯಲು ಷರತ್ತುಗಳನ್ನು ವಿಧಿಸಿದ ರಾಜ್ಯ ಸರ್ಕಾರ

spot_img
- Advertisement -
- Advertisement -

ಬೆಂಗಳೂರು;  ಗೃಹ ಜ್ಯೋತಿ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿನಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳನ್ನು ವಿಧಿಸಿ, ಜಾರಿಗೆ ತರಲು ಸರ್ಕಾರ ಆದೇಶಿಸಿದೆ. ಆ  ಷರತ್ತುಗಳು ಇಂತಿವೆ..

  • ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ
  • ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
  • ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು. ಗ್ರಾಹಕರು ನೆಟ್ ಬಿಲ್ ಅನ್ನು ಪಾವತಿಸುವುದು.
  • ಅರ್ಹ ಯೂನಿಟ್ ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ಅನ್ನು ನೀಡಲಾಗುವುದು.
  • ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
  • ಪ್ರತಿ ಫಲಾನುಭವಿಯು ತನ್ನ ಕಸ್ಟಮರ್ ಐಡಿ, ಅಕೌಂಟ್ ಐಡಿಯನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.
  • ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
  • ದಿನಾಂಕ 30-06-2023ರ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
  • ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು. ಮಾರಕ ಓದುವುದು ಕಡ್ಡಾಯವಾಗಿರುತ್ತದೆ.
  • ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗುವರು.

- Advertisement -
spot_img

Latest News

error: Content is protected !!